ಎಲ್ಲೋ ಅವಿತಂತೆ ಮಾಡಿ ಕಣ್ಣ ಮುಚ್ಚೆ ಕಾಡೆಗೂಡೆ ಮಾಡಿ ಎಲ್ಲಿರುವೆ ಹುಡುಕು ಎಂಬಂತೆ ಕಣ್ಣು ಕಟ್ಟಿ ಬಿಟ್ಟಿರುವೆ ನೀನು,ಕಟ್ಟಿರುವ ಕಣ್ಣು ಬಿಚ್ಚಿದ್ದರೂ
ಕಣ್ಣ ಮುಂದೆಯೇ ನೀನಿರುವುದ ಅರಿತಿರಲಿಲ್ಲ
ನೀ ಎಲ್ಲೋ ಅಲ್ಲ ನಮ್ಮ ಮುಂದೆಯೇ ಇರುವುದ ಅರಿತಿರಲಿಲ್ಲ
ನಿನ್ನ ಕಾಣಲೆಂದು ಎಲ್ಲಿಂದಲೋ ಬರುವವರ
ನಿಷ್ಥೆಯಲ್ಲಿ ನೀನಿರುವುದ ಅರಿತಿರಲಿಲ್ಲ
ನಿನ್ನ ಕಾಣಲೆಂದು ದೇಹವ ದಂಡಿಸಿ
ಸುರಿಸುವ ಬೆವರಹನಿಯಲ್ಲಿ ನೀನಿರುವುದ ಅರಿತಿರಲಿಲ್ಲ
ಆಚಾರ ,ವಿಚಾರಗಳ ತಿಳಿಯದೆ ಸಂಪೂರ್ಣ ಶರಣಾದವರ ಶರಣಾಗತಿಯಲ್ಲಿ ನೀನಿರುವುದ ಅರಿತಿರಲಿಲ್ಲ
ವಿದ್ಯೆ,ಬುದ್ಧಿ,ಸಂಪತ್ತುಗಳ ಹೊಂದಿದ್ದರೂ ಎಲ್ಲವ ಹೊರತಾಗಿಯೂ ಭಕ್ತಿ,ವಿವೇಕದಲ್ಲಿ ನೀನಿರುವ ಅರಿವಿರಲಿಲ್ಲ
ಸಾಧಕರ ಸಾಧನೆಯ ದಾರಿಯಲ್ಲಿ ನೀನಿರುವುದ ಅರಿತಿರಲಿಲ್ಲ
ಹೆಜ್ಜೆಯಿಡುವ ಪ್ರತಿ ಹೆಜ್ಜೆಯಲ್ಲಿ ನೀನಿರುವುದ ಅರಿತಿರಲಿಲ್ಲ
ಜೀವನದ ಪ್ರತಿ ಕ್ಷಣದಲ್ಲೂ ನೀ ಅವಿರುವುದ ಅರಿತಿರಲಿಲ್ಲ
ಪ್ರಕೃತಿಯ ಹಸಿರು ಹಾಸಿನಲ್ಲಿ, ಅಲ್ಲೆ ಬೆಟ್ಟದ ಮಡಿಲಲ್ಲಿ ಬಿದ್ದಿರುವ ಕಲ್ಲಿನಲ್ಲಿ ನೀ ಅವಿತಿರುವುದ ಅರಿತಿರಲಿಲ್ಲ
ನಿನ್ನದೇ ಮೂರ್ತಿಯ ಕಂಡು ಭಾವನೆಗಳ ಮನದಲ್ಲಿ ತುಂಬಿಕೊಂಡು ಕಣ್ಣಲ್ಲಿ ಸುರಿಸುವ ಕಣ್ಣೀರಿನಲ್ಲಿ ನೀ ಅವಿತಿರುವುದ ಅರಿತಿರಲಿಲ್ಲ

No comments:
Post a Comment